ರಾಯಚೂರು : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿ ಘಟನೆ ರಾಯಚೂರಿನಲ್ಲೂ ಸಹ ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ.
ನಿನ್ನೆ (ಆಗಸ್ಟ್ 31_ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಇಂದು (ಸೆಪ್ಟೆಂಬರ್ 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ. ನಿನ್ನೆಯೂ ಸಹ ಮಂಡೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದರು.