ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಂಗ್ರೆಸ್ ಮತ್ತು ಆರ್ಜೆಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಘಟನೆಯು ದೇಶದ ಪ್ರತಿಯೊಬ್ಬ ಮಹಿಳೆಗೆ, ವಿಶೇಷವಾಗಿ ಬಿಹಾರಕ್ಕೆ ಮಾಡಿದ ಅವಮಾನ ಎಂದು ಪ್ರತಿಪಾದಿಸಿದರು.
ಬಿಹಾರದ ದರ್ಭಾಂಗದಲ್ಲಿ ನಡೆದ ರಾಹುಲ್ ಗಾಂಧಿ ಅವರ ‘ವೋಟ್ ಅಧಿಕಾರ್ ಯಾತ್ರೆ’ಯಲ್ಲಿ ಕಾಂಗ್ರೆಸ್ ನಾಯಕರು ಹಂಚಿಕೊಂಡ ವೇದಿಕೆಯಿಂದ ಪ್ರಧಾನಿ ಮೋದಿಯವರ ತಾಯಿಯನ್ನು ಗುರಿಯಾಗಿಸಿಕೊಂಡು ನಿಂದನಾತ್ಮಕ ಘೋಷಣೆಗಳನ್ನು ಕೂಗಿದ ಸಂದರ್ಭದಲ್ಲಿ ಈ ವಿವಾದ ಭುಗಿಲೆದ್ದಿದೆ.