ಧಾರವಾಡ : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಇದೀಗ ಇಂದು ಧಾರವಾಡ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಹೌದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೇಹಾ ಕೊಲೆ ಕೆಎಸ್ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಫಯಾಜ್ ಅರ್ಜಿ ಸಲ್ಲಿಸಿದ್ದ ಈ ಹಿಂದೆ ಹುಬ್ಬಳ್ಳಿಯ 1ನೇ ಹಿರಿಯ ಮತ್ತು ಸತ್ರ ನ್ಯಾಯಾಲಯ ಕೂಡ ಫಯಾಜ್ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಧಾರವಾಡ ಹೈಕೋರ್ಟ್ ಕೂಡ ಇದೀಗ ಫಯಾಜ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿದೆ.