Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಸಲಹೆಗಳನ್ನು ಪಾಲಿಸಿ, ನಿಮ್ಮ ಸಂಗಾತಿಯೊಂದಿಗೆ ದೀರ್ಘಕಾಲಿಕವಾಗಿ ‘ಲೈಂಗಿಕ ಮಿಲನ’ ನಡೆಸಿ

04/03/2026 6:27 PM

ನಿಮ್ಗೆ ಗೊತ್ತಾ? ಟಿಫಿನ್ ಬಾಕ್ಸ್ ಹಿಡಿದು ಮುಂಬೈ ರೈಲು ಹತ್ತಿದ ಇವ್ರಿಂದು 42 ಸಾವಿರ ಕೋಟಿ ಸಾಮ್ರಾಜ್ಯದ ಒಡೆಯ!

04/03/2026 6:19 PM

BREAKING: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಇರಾನ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ: CM ಸಿದ್ದರಾಮಯ್ಯ 
KARNATAKA

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ: CM ಸಿದ್ದರಾಮಯ್ಯ 

By kannadanewsnow0703/09/2025 2:06 PM

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯ ಮುಖ್ಯಾಂಶಗಳು ಹೀಗಿವೆ. 

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ  ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ  ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.

ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.

 ಆದ್ದರಿಂದ,  ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ  ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ: 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ.

ಸಚಿವರಾದ ಎಚ್ ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ  ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ropeway construction work to Anjanadri Hill: CM Siddaramaiah ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM1 Min Read

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM2 Mins Read

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read
Recent News

ಈ ಸಲಹೆಗಳನ್ನು ಪಾಲಿಸಿ, ನಿಮ್ಮ ಸಂಗಾತಿಯೊಂದಿಗೆ ದೀರ್ಘಕಾಲಿಕವಾಗಿ ‘ಲೈಂಗಿಕ ಮಿಲನ’ ನಡೆಸಿ

04/03/2026 6:27 PM

ನಿಮ್ಗೆ ಗೊತ್ತಾ? ಟಿಫಿನ್ ಬಾಕ್ಸ್ ಹಿಡಿದು ಮುಂಬೈ ರೈಲು ಹತ್ತಿದ ಇವ್ರಿಂದು 42 ಸಾವಿರ ಕೋಟಿ ಸಾಮ್ರಾಜ್ಯದ ಒಡೆಯ!

04/03/2026 6:19 PM

BREAKING: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಇರಾನ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 6:16 PM

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM
State News
KARNATAKA

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

By kannadanewsnow0904/03/2026 6:02 PM KARNATAKA 1 Min Read

ಶಿವಮೊಗ್ಗ: ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಭಾರತೀಯ ಜನತಾ ಪಾರ್ಟಿಯು ಪ್ರಮುಖ ಜಿಲ್ಲಾ ಪ್ರಭಾರಿಗಳ…

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.