ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೋರೇಷನ್ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದೆ.
ವಿಧಾನಸೌಧ, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಹಡ್ಸನ್ ವೃತ್ತ, ಬಳ್ಳಾರಿ ರಸ್ತೆ, ಶಿವಾನಂದ ವೃತ್ತ, ಶಾಂತಿನಗರ, ಗುಟ್ಟಹಳ್ಳಿ, ಕಬ್ಬನ್ ಪಾರ್ಕ್, ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು, ಪಾದಚಾರಿಗಳ ಪರದಾಟ ನಡೆಸಿದ್ದಾರೆ.