Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಷ್ಟೇ ಅಲ್ಲ, ಮಾನವೀಯತೆಯಲ್ಲೂ ಮುಂದೆ: ಪಂಜಾಬ್ ಕಿಂಗ್ಸ್‌ನಿಂದ ಪ್ರವಾಹ ಪರಿಹಾರಕ್ಕೆ ₹33.8 ಲಕ್ಷ ದೇಣಿಗೆ

05/09/2025 7:02 AM

ಯುಎಸ್-ಜಪಾನ್ ವ್ಯಾಪಾರ ಒಪ್ಪಂದಕ್ಕೆ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ | Trump tariff

05/09/2025 6:54 AM

BREAKING: ನೇಪಾಳದಲ್ಲಿ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ನಿಷೇಧ

05/09/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್
KARNATAKA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

By kannadanewsnow5703/09/2025 4:55 PM

ಬೆಂಗಳೂರು : ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಮ್ಮ ರಕ್ತದಾಹ ನಿಲ್ಲಿಸಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹರಿಹಾಯ್ದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳಕ್ಕೆ ಬಿಜೆಪಿಯವರು ಭೇಟಿ ಜೊತೆಗೆ ಸೌಜನ್ಯ ಅವರ ಮನೆಗೂ ಭೇಟಿ ನೀಡಿದ ಬಗ್ಗೆ ಕೇಳಿದಾಗ, “ಯಾತ್ರೆಯಲ್ಲಿ ಅಲ್ಲಿನ ಜನಪ್ರತಿನಿಧಿಗಳೂ ಸಹ ಶ್ರೀಕ್ಷೇತ್ರವನ್ನು ಒಪ್ಪಿ ಮಾತನಾಡಿಲ್ಲ. ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ. ಇದು ಕ್ಷೇತ್ರದ ಮೇಲೆ ಇರುವ ಗೌರವದಿಂದ ಮಾಡಿರುವ ಯಾತ್ರೆಯಲ್ಲ” ಎಂದರು.

“ಬಿಜೆಪಿ- ಜೆಡಿಎಸ್ ಅವರು ಏತಕ್ಕೆ ಯಾತ್ರೆ ಮಾಡಿದ್ದಾರೆ. ಯಾರಿಗೆ ಸಾಂತ್ವನ ಹೇಳಲು ಯಾತ್ರೆಗೆ ಹೋಗಿದ್ದಾರೆ ಎಂದು ಪ್ರಶ್ನೆಸಿದ ಸುರೇಶ್ ಅವರು, ಬಿಜೆಪಿಯವರ ರಾಜಕೀಯ ಬೇಳೆ ಅಲ್ಲಿ ಬೇಯುವುದಿಲ್ಲ. ಏಕೆಂದರೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಬಿಜೆಪಿಗರ ರಾಜಕೀಯ ಒಳ ಒಪ್ಪಂದಗಳನ್ನು ಅರಿತಿದ್ದಾರೆ” ಎಂದರು.

“ಈ ಹಿಂದೆಯೂ ಸೌಜನ್ಯ ಅವರ ಮನೆಗೆ ತೆರಳಿ ಸಾಂತ್ವನವೆಂಬ ನಾಟಕವಾಡಿ ಯಾವ ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವುದು ದಾಖಲೆಗಳಲ್ಲಿದೆ. ಈಗಲೂ ಸಹ ಇದೇ ರೀತಿಯ ವ್ಯವಸ್ಥೆ ರೂಪಿಸಿ ಜನರನ್ನು ಮರುಳು ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ರಾಜಕೀಯ ಮಾಡುವವರಿಗೆ ನಾಚಿಕೆಯಾಗಬೇಕು

“ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ. ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವವರಿಗೆ ನಾಚಿಕೆಯಾಗಬೇಕು. ಸೌಜನ್ಯ ಪ್ರಕರಣ ಸೇರಿದಂತೆ ಅನೇಕ ಆರೋಪಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುಂಚಿತವಾಗಿಯೂ ನಡೆದಿತ್ತು. ಈ ಆರೋಪಗಳು ಬಂದಂತಹ ಸಂದರ್ಭದಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಯಾವುದೇ ರೀತಿಯ ಹೇಳಿಕೆ ನೀಡಿದ ಉದಾಹರಣೆಗಳು ಎಲ್ಲಿಯೂ ಇಲ್ಲ” ಎಂದರು.

“ನಿಷ್ಪಕ್ಷವಾಗಿ ಎಸ್ ಐಟಿ ತನಿಖೆ ನಡೆದ ನಂತರ ಏಕಾಏಕಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ, ಈ ಕ್ಷೇತ್ರದ ಪರವಾಗಿ ನಾವಿದ್ದೇವೆ ಎಂದು ಅವರು ಹೇಳಿದ ನಂತರ, ಬಿಜೆಪಿ ಹಾಗೂ ಜೆಡಿಎಸ್ ನವರು ಈ ತರಾತುರಿಯಲ್ಲಿ ಯಾತ್ರೆ ಮಾಡಿದ್ದಾರೆ” ಎಂದು ಜರಿದರು.

ಇದು ಆರ್ ಎಸ್ ಎಸ್ ನ ಎರಡು ಬಣಗಳ ಕಿತ್ತಾಟವೇ ಎಂದು ಕೇಳಿದಾಗ, “ಈ ವಿಚಾರ ಎಲ್ಲರಿಗೂ ತಿಳಿದಿದೆ. ಈ ವಿಚಾರ ಏಕೆ ಉಲ್ಬಣವಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ದಕ್ಷಿಣ ಕನ್ನಡ ಜಿಲ್ಲೆಗೆ ಹೋದರೆ ತಿಳಿಯುತ್ತದೆ. ಆರ್ ಎಸ್ ಎಸ್ ಹಾಗೂ ಬಿಜೆಪಿಯ ಎರಡು ಬಣಗಳ ವಿಚಾರ ಇರಬಹುದು. ಇವರ ನಾಟಕ ಇಲ್ಲಿಗೆ ನಿಲ್ಲಬೇಕು” ಎಂದರು.

ಸೌಜನ್ಯ ಕುಟುಂಬದವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರೆ ಖರ್ಚು ವೆಚ್ಚ ನೀಡುವುದಾಗಿ ವಿಜಯೇಂದ್ರ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಅವರನ್ನೇ ಕೇಳಬೇಕು. ಏತಕ್ಕಾಗಿ ಈ ಪ್ರಕರಣದ ಖರ್ಚು ವೆಚ್ಚ ಭರಿಸುತ್ತೀರಿ? ಇಂತಹ ಹೇಳಿಕೆಯನ್ನು ಈ ಹಿಂದೆಯೂ ನೀಡಲಾಗಿತ್ತು. ಇವರಿಗೆ ರಾಜಕೀಯ ನೆನಪುಗಳು ಕಡಿಮೆ ಇರಬೇಕು” ಎಂದರು.

ಇದು ಮತಬ್ಯಾಂಕ್ ರಾಜಕಾರಣವೇ ಎಂದು ಕೇಳಿದಾಗ, “ಮತ ಬ್ಯಾಂಕ್ ರಾಜಕಾರಣ ಚುನಾವಣಾ ಸಮಯದಲ್ಲಿ ನಡೆಯುತ್ತದೆ, ಈಗ ನಡೆಯುತ್ತಿರುವುದು ಕೆಸರೆರಚಾಟ” ಎಂದರು.

ಮುನಿರತ್ನ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಬಿ ರಿಪೋರ್ಟ್ ನೀಡಿರುವ ಬಗ್ಗೆ ಕೇಳಿದಾಗ, “ಇದು ಬಿಜೆಪಿಯವರ ವಿಚಾರ, ಅವರನ್ನೇ ಕೇಳಬೇಕು. ಇದು ನಮಗೆ ಸಂಬಂಧಿಸಿದ ವಿಚಾರವಲ್ಲ. ದೂರು ನೀಡಿದವರು ಬಿಜೆಪಿ ಕಾರ್ಯಕರ್ತೆ. ಅವರದ್ದೇ ಪಕ್ಷದ ಕಾರ್ಯಕರ್ತೆ ಅತ್ಯಾಚಾರವಾಗಿದೆ ಎಂದು ದೂರು ನೀಡಿದ್ದರು. ಆ ಹೆಣ್ಣು ಮಗಳು ಎಲ್ಲಿಂದ ಸಾಕ್ಷಿ ಒದಗಿಸಲು ಆಗುತ್ತದೆ. ಅವರ ಶಾಸಕರಷ್ಟು ಬುದ್ದಿವಂತರಲ್ಲವಲ್ಲ ಅವರು” ಎಂದು ವ್ಯಂಗ್ಯವಾಡಿದರು.

ಜಾತಿನಿಂದನೆ, ಅತ್ಯಾಚಾರ ಆರೋಪ ನಿಜವಾಗಿದೆಯಲ್ಲ

“ಜಾತಿ ನಿಂದನೆ ಆರೋಪದಲ್ಲಿ, ಇನ್ನೊಂದು ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಸಾಬೀತಾಗಿದೆಯಲ್ಲ. ಇದರ ಬಗ್ಗೆ ಮಾಧ್ಯಮಗಳು ಮಾತನಾಡಬೇಕು. ಬಿಜೆಪಿ ಕಾರ್ಯಕರ್ತೆಗೆ ಆಗಿರುವ ಅನ್ಯಾಯದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ನಾಯಕರು ಇದರ ಬಗ್ಗೆ ಉತ್ತರ ನೀಡಬೇಕು. ಹೀರೋ ತರ ಜನರ ಮುಂದೆ ಬಂದು ಭಾಷಣ ಮಾಡುತ್ತಿದ್ದಾರೆ. ಯಾವ ಮುಖ ಹೊತ್ತುಕೊಂಡು ಭಾಷಣ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ರಾಜೇಂದ್ರ, ರಾಜಣ್ಣ ಹಿರಿಯ ನಾಯಕರು

ಶಿವಕುಮಾರ್ ಅವರು ಬಿಜೆಪಿಗೆ ಹೋಗಬಹುದು ಎನ್ನುವ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದಾಗ, “ರಾಜೇಂದ್ರ ಅವರು ಹಾಗೂ ರಾಜಣ್ಣ ಅವರು ಇಬ್ಬರೂ ಹಿರಿಯ ನಾಯಕರು. ಅವರಿಗೆ ಏನೇನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಯವರು, ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯವರು ಉತ್ತರ ನೀಡುತ್ತಾರೆ” ಎಂದರು.

ಸೆಪ್ಟೆಂಬರ್ ಕ್ರಾಂತಿ ಎಂದರೆ ಬಿಜೆಪಿಗೆ ಹೋಗುವುದು ಎನ್ನುವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಬಳಿ ಜನಬೆಂಬಲವೂ ಇಲ್ಲ. ಅವರಷ್ಟು ತಿಳುವಳಿಕೆಯೂ ಇಲ್ಲ. ನಮಗೆ ಇರುವುದು ಕಾಂಗ್ರೆಸ್ ಪಕ್ಷವೊಂದೇ, ಆ ಪಕ್ಷದ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಧ್ವಜದ ಕೆಳಗೆ, ಕಾಂಗ್ರೆಸ್ಸಿಗರ ಜೊತೆಗೆ ಕೆಲಸ ಮಾಡಿ ಅಭ್ಯಾಸವಿದೆ. ಉಳಿದದ್ದು ಅವರಿಗೆ ಬಿಟ್ಟಿದ್ದು” ಎಂದು ಹೇಳಿದರು.

ರಾಜಣ್ಣ ಅವರ ವಿರುದ್ಧ ಪಿತೂರಿಯಾಯಿತು ಎನ್ನುವ ಬಗ್ಗೆ ಕೇಳಿದಾಗ, “ಪಿತೂರಿ ಮಾಡಲು ಜನಗಳೇ ಇಲ್ಲ. ಜನಗಳು ಎಲ್ಲಿದ್ದಾರೆ?” ಎಂದರು.

Stop the bloodlust in Dakshina Kannada district and save the sanctity of Dharmasthala; D.K. Suresh lashes out at the opposition parties
Share. Facebook Twitter LinkedIn WhatsApp Email

Related Posts

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM1 Min Read

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ : ಗೂಡ್ಸ್ ವಾಹನದ ಗಾಜು ಒಡೆದು ಬೈಕ್ ಸವಾರ ಪುಂಡಾಟ

05/09/2025 6:17 AM1 Min Read

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM1 Min Read
Recent News

ಕ್ರೀಡೆಯಷ್ಟೇ ಅಲ್ಲ, ಮಾನವೀಯತೆಯಲ್ಲೂ ಮುಂದೆ: ಪಂಜಾಬ್ ಕಿಂಗ್ಸ್‌ನಿಂದ ಪ್ರವಾಹ ಪರಿಹಾರಕ್ಕೆ ₹33.8 ಲಕ್ಷ ದೇಣಿಗೆ

05/09/2025 7:02 AM

ಯುಎಸ್-ಜಪಾನ್ ವ್ಯಾಪಾರ ಒಪ್ಪಂದಕ್ಕೆ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ | Trump tariff

05/09/2025 6:54 AM

BREAKING: ನೇಪಾಳದಲ್ಲಿ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ನಿಷೇಧ

05/09/2025 6:40 AM

ಚರ್ಮ ಕ್ಯಾನ್ಸರ್ ಗಡ್ಡೆ ತೆರವು: ಮಾಜಿ ಅಮೇರಿಕಾ ಅಧ್ಯಕ್ಷ ಬೈಡನ್ ಶಸ್ತ್ರಚಿಕಿತ್ಸೆ ಯಶಸ್ವಿ | Biden

05/09/2025 6:37 AM
State News
KARNATAKA

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

By kannadanewsnow0505/09/2025 6:33 AM KARNATAKA 1 Min Read

ಬೆಂಗಳೂರು : ಈಗಾಗಲೇ ಧರ್ಮಸ್ಥಳದಲ್ಲಿ ಶವ ಹೂತು ಹಾಕಿರುವ ಕುರಿತು SIT ಅಧಿಕಾರಿಗಳು ಚಿನ್ನಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ…

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ : ಗೂಡ್ಸ್ ವಾಹನದ ಗಾಜು ಒಡೆದು ಬೈಕ್ ಸವಾರ ಪುಂಡಾಟ

05/09/2025 6:17 AM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ : 1413 ಕೋಟಿ ಆಸ್ತಿ ಒಡೆಯ ಡಿಸಿಎಂ ಡಿಕೆಶಿ

05/09/2025 6:13 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ ಯೋಜನೆ’ಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

05/09/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.