ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ತಾಲೂಕಿನ ಹೊಸೂರು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಚಿಕ್ಕವೀರಯ್ಯ ಹಿರೇಮಠ (45), ಶೇಖಪ್ಪ ಪತ್ತಾರ್ (67) ಮೃತಪಟ್ಟಿದ್ದಾರೆ. ಮೃತರು ಬಾಗಲಕೋಟೆ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದವರು. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.