ಬಳ್ಳಾರಿ : ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಪರಿಸರ ಪ್ರಚಾರ ಮತ್ತು ಸಂರಕ್ಷಣೆಯ ಕಡೆಗೆ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಕರ್ನಾಟಕದ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಆವರಣವನ್ನು ಸ್ವಚ್ಛವಾಗಿಡಲು ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸ್ವಚ್ಛತಾ ಅಭಿಯಾನ ನಡೆಸಬೇಕು ಎಂದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳಿರುವಂತೆ “ರಾಷ್ಟçಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಿಸಲ್ಪಟ್ಟಿವೆ” ಎಂಬ ಈ ಚಿಂತನೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಸಂಸ್ಥೆಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿರಬೇಕು. ಇದಕ್ಕಾಗಿ ವಿಶ್ವವಿದ್ಯಾಲಯಗಳನ್ನು ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡುವ ಮತ್ತು ಅಂತರ-ಶಿಸ್ತಿನ ಹಾಗೂ ಅಂತರ-ವಿಶ್ವವಿದ್ಯಾಲಯ ಸಹಯೋಗವನ್ನು ಉತ್ತೇಜಿಸುವ ಕಡೆಗೆ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.
21 ನೇ ಶತಮಾನದ ಅಗತ್ಯವೆಂದರೆ ಡಿಜಿಟಲ್ ಸಾಕ್ಷರತೆ, ನವೀನ ಚಿಂತನೆ, ಜಾಗತಿಕ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜ್ಞಾನ ಬೆಳೆಸಿಕೊಳ್ಳಬೇಕು. ಇದಕ್ಕಾಗಿ, ಜೀವನಪರ್ಯಂತ ವಿದ್ಯಾರ್ಥಿಯಾಗುವ ಮೂಲಕ ಕಲಿಯುತ್ತಲೇ ಇರಬೇಕಾಗುತ್ತದೆ. ಆತ್ಮನಿರ್ಭರ ಭಾರತದ ಮೂಲಕ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವಾಗಲು ಯುವಕರು ತಮ್ಮ ಪ್ರತಿಭೆ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ನೀಡಬೇಕು. ಯುವಪೀಳಿಗೆ ಉದ್ಯೋಗಾಕಾಂಕ್ಷಿಯಾಗಿ ಬದಲಾಗಿ ಉದ್ಯೋಗ ಒದಗಿಸುವವರ ಪಾತ್ರವನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ನಮ್ಮ ದೇಶ ಸಾವಿರಾರು ವರ್ಷಗಳಿಂದ ಜ್ಞಾನದ ದೀಪವನ್ನು ಬೆಳಗಿಸುತ್ತಿದೆ, ವೇದಗಳು, ಉಪನಿಷತ್ತುಗಳು, ಆಯುರ್ವೇದ, ಯೋಗ, ವಾಸ್ತು, ತತ್ವಶಾಸ್ತç, ನ್ಯಾಯಶಾಸ್ತç, ಇವು ನಮ್ಮ ಅಮೂಲ್ಯ ಪರಂಪರೆ. ಹೊಸ ಶಿಕ್ಷಣ ನೀತಿಯು ಶಿಕ್ಷಣ ವ್ಯವಸ್ಥೆಯಲ್ಲಿ ಅವುಗಳಿಗೆ ಮತ್ತೆ ಸ್ಥಾನ ನೀಡಿದೆ. ಯುವಕರು ಈ ಜ್ಞಾನದ ಹರಿವುಗಳನ್ನು ಆಧುನಿಕ ಸಂದರ್ಭದಲ್ಲಿ ಅರ್ಥಮಾಡಿಕೊಳ್ಳಬೇಕು, ಸಂಶೋಧನೆ ಮಾಡಬೇಕು ಮತ್ತು ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಬೇಕು ಎಂದು ಕಿವಿಮಾತು ಹೇಳಿದರು.
ಭಾರತ ‘ವಿಶ್ವ ಗುರು’ ಆಗುವತ್ತ ಪಯಣದಲ್ಲಿದೆ. ಇಂದು, ದೇಶವು 100 ಕ್ಕೂ ಹೆಚ್ಚು ಯುನಿಕಾರ್ನ್ ಸ್ಟಾರ್ಟ್ಅಪ್ ಗಳನ್ನು ಹೊಂದಿದೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯು ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯವಸ್ಥೆಯಾಗಿದೆ ಮತ್ತು ಚಂದ್ರಯಾನದಿAದ ಎಐ ವರೆಗಿನ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಪ್ರಮುಖ ಪಾತ್ರ ವಹಿಸುತ್ತಿದ್ದೇವೆ. ಈ ಪ್ರಯಾಣದಲ್ಲಿ ಪ್ರಮುಖ ಶಕ್ತಿ ನಿಮ್ಮಂತಹ ಯುವಕರು ಎಂದು ಹೇಳಿದರು.
“ಎದ್ದೇಳಿ, ಎಚ್ಚರಗೊಳ್ಳಿ ಮತ್ತು ಗುರಿ ಸಾಧಿಸುವವರೆಗೆ ನಿಲ್ಲಬೇಡಿ” ಸ್ವಾಮಿ ವಿವೇಕಾನಂದರ ಈ ವಾಕ್ಯದಿಂದ ಸ್ಫೂರ್ತಿ ಪಡೆದು, ನಮ್ಮ ಜ್ಞಾನವನ್ನು ಕಾರ್ಯರೂಪಕ್ಕೆ ತರಬೇಕು ಮತ್ತು ರಾಷ್ಟçವನ್ನು ಅಭಿವೃದ್ಧಿ ಹೊಂದಿದ ರಾಷ್ಟçವನ್ನಾಗಿ ಮಾಡಲು ನಮ್ಮ ಕೌಶಲ್ಯಗಳನ್ನು ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಳ್ಳಾರಿಯು ಪ್ರಾಚೀನ ಕಾಲದಿಂದಲೂ ಬಹಳ ಭವ್ಯವಾದ ಇತಿಹಾಸವನ್ನು ಹೊಂದಿದೆ. ಈ ವಿಶ್ವವಿದ್ಯಾಲಯವು ಕಲೆ, ಸಾಹಿತ್ಯ ಮತ್ತು ಶಿಕ್ಷಣದ ಭೂಮಿಯಾಗಿದೆ. ರಾಜ ಶ್ರೀ ಕೃಷ್ಣದೇವರಾಯನು ತನ್ನ ಪ್ರಜೆಗಳ ಕಡೆಗೆ ತೋರಿಸಿದ ಔದಾರ್ಯ ಮತ್ತು ದಯೆಗಾಗಿ ಪ್ರಸಿದ್ಧವಾಗಿದ್ದ ಐತಿಹಾಸಿಕ ಭೂಮಿಯಲ್ಲಿ ನೆಲೆಗೊಂಡಿದೆ. ಈ ಘಟಿಕೋತ್ಸವದಲ್ಲಿ ಡಾ.ವಸುಂಧರಾ ಭೂಪತಿ, ಬಿ.ನಾಗನಗೌಡ ಮತ್ತು ಇರ್ಫಾನ್ ರಜಾಕ್ ಅವರಿಗೆ ಶಿಕ್ಷಣ, ಸಾಹಿತ್ಯ, ಆರೋಗ್ಯ ಮತ್ತು ಸಾಮಾಜಿಕ ಕಾರ್ಯ ಕ್ಷೇತ್ರದಲ್ಲಿ ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಗೌರವ ಪದವಿಗಳನ್ನು ನೀಡಿ ಗೌರವಿಸಲಾಗಿದೆ. ಅವರು ಸಮಾಜ, ಜನರು ಮತ್ತು ರಾಷ್ಟçದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದವರಿಸಲಿ ಎಂದು ಆಶಿಸಿದರು.
ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್ ನ ನಿರ್ದೇಶಕರಾದ ಪ್ರೊ.ಅವಿನಾಶ್ ಚಂದ್ರ ಪಾಂಡೆ ಅವರು ಘಟಿಕೋತ್ಸವ ಭಾಷಣದಲ್ಲಿ ಮಾತನಾಡಿ, ಘಟಿಕೋತ್ಸವವು ಕೇವಲ ಒಂದು ಸಮಾರಂಭವಲ್ಲ;ಇದು ಪ್ರತಿ ವಿದ್ಯಾರ್ಥಿಯ ಪರಿಶ್ರಮ, ಶಿಸ್ತಿನ ಜೀವನ ಮತ್ತು ನಿಶ್ಚಯ ಹಾದಿಯ ಫಲಶ್ರುತಿಯಾಗಿದೆ. ವಿದ್ಯಾರ್ಥಿಗಳ ಸಾಧನೆಗಳು ಭವಿಷ್ಯದ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.
ಪೋಷಕರ ತ್ಯಾಗ ಮತ್ತು ಅಚಲ ಬೆಂಬಲವು ಮಕ್ಕಳ ಯಶಸ್ಸಿನ ಆಧಾರವಾಗಿದೆ. ಶಿಕ್ಷಕರ ಬೋಧನೆ, ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಇಂದಿನ ಯುವಕರು ತಮ್ಮ ಕನಸುಗಳನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಅಭಿಮತ ವ್ಯಕ್ತಪಡಿಸಿದರು.
ಪದವಿಯೊಂದೇ ಅಂತಿಮ ಗುರಿಯಲ್ಲ, ಅದು ಜೀವನಪರ್ಯಂತ ಕಲಿಕೆಯ ಪಯಣದ ಹಂತ ಮಾತ್ರ. ವಿನಯವಂತಿಕೆ, ಹೊಂದಿಕೊಳ್ಳುವಿಕೆ ಮತ್ತು ನಿರಂತರ ಜ್ಞಾನಾರ್ಜನೆಯು ಸಮಾಜದಲ್ಲಿ ವಿಶಿಷ್ಟರನ್ನಾಗಿ ಮಾಡುತ್ತದೆ. ನಿಜವಾದ ಯಶಸ್ಸು ಸಂಪತ್ತಿನಲ್ಲಿಯಾಗಲಿ ಅಥವಾ ಹುದ್ದೆಗಳಲ್ಲಿ ಆಗಲಿ ಅಳೆಯಲು ಬರುವುದಿಲ್ಲ. ಅದು ನೀವು ನೀಡುವ ಕೊಡುಗೆಯ ಸಮಾಜದ ಮೇಲೆ ಬೀರಿದ ಸಕಾರಾತ್ಮಕ ಪ್ರಭಾವದಲ್ಲಿ ಅಳೆಯಲ್ಪಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜ.ಸಿ., ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮುಂತಾದ ಗಣ್ಯರು ಹಾಜರಿದ್ದರು.
3 ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಇರ್ಫಾನ್ ರಜಾಕ್, ಡಾ.ವಸುಂಧರಾ ಭೂಪತಿ, ಬಾವಿಹಳ್ಳಿ ನಾಗನಗೌಡ ಸೇರಿ ಮೂರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಿ ರಾಜ್ಯಪಾಲರು ಗೌರವಿಸಿದರು.
ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 51 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ವಿವಿಧ ವಿಭಾಗಗಳ ಒಟ್ಟು 59 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದುಕೊಂಡರು.
ಎಲ್ಲ ವಿಭಾಗಗಳ ಸ್ನಾತಕ ಪದವಿಯ 80 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 75 ವಿದ್ಯಾರ್ಥಿಗಳು ಸೇರಿ ಒಟ್ಟು 155 ವಿದ್ಯಾರ್ಥಿಗಳು ರ‍್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆದುಕೊಂಡರು.
04 ಚಿನ್ನದ ಪದಕ ಪಡೆದ ವಿದ್ಯಾರ್ಥಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ವಿಭಾಗದ ವಿದ್ಯಾರ್ಥಿ ಹಂಸ.ಎನ್ ಅವರು 04 ಚಿನ್ನದ ಪದಕಗಳನ್ನು ಪಡೆದುಕೊಂಡರು.
03 ಚಿನ್ನದ ಪದಕ ಪಡೆದ ವಿದ್ಯಾರ್ಥಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನಶಾಸ್ತç ವಿಭಾಗದ ವಿದ್ಯಾರ್ಥಿ ರಾಜೇಶ್ವರಿ ಅವರು 03 ಚಿನ್ನದ ಪದಕಗಳನ್ನು ಪಡೆದುಕೊಂಡರು.
02 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತç ವಿಭಾಗದ ಮನೋಜ್, ರಸಾಯನಶಾಸ್ತç ವಿಭಾಗದ ಸುಹಾನ ತಸ್ಲೀಮ್, ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಶಿಲ್ಪ, ಬಿಬಿಸಿ ಕಾಲೇಜ್ ನ ಬಿಕಾಂ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಮತ್ತು ವೀರಶೈವ ಮಹಾವಿದ್ಯಾಲಯದ ಬಿಎಸ್ಸಿ ವಿದ್ಯಾರ್ಥಿ ಮಹಮ್ಮದ್ ನಕೀಬಲಿ ಇವರುಗಳು ಪಡೆದುಕೊಂಡರು.