ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಸರ್ಕಾರಿ ಪ್ರೌಢಶಾಲೆಯ ಬಾಲಕರು ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಸರ್ಕಾರಿ ಪ್ರೌಢಶಾಲೆಯ 17 ವರ್ಷದ ಒಳಗಿನ ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದಲ್ಲದೇ ಉಳವಿಯ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರು ಕೂಡ ಕಬ್ಬಡಿ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಉಳವಿಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಈ ಕ್ರೀಢಾ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಹರ್ಷ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ಶಾಲಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಿದ ಪೋಷಕರಿಗೆ ವಂದನೆ ತಿಳಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…