ಮಂಡ್ಯ: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಎಡಮುರಿಗೆ ತೆರಳಿದ್ದಂತ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಕಾವೇರಿ ನದಿಯ ಪ್ರವಾಸಿ ತಾಣವಾಗಿರುವ ಎಡಮುರಿ ವಾಟರ್ ಪಾಲ್ಸ್. ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ಮೃತ ದುರ್ದೈವಿಗಳಾಗಿದ್ದಾರೆ.
ಮೃತ ವಿದ್ಯಾರ್ಥಿಗಳ್ನು ಶ್ಯಾಮ್(20) ವೆಂಕಟೇಶ್ (20) ಎಂದು ಗುರುತಿಸಲಾಗಿದೆ. ಕಾಲೇಜಿಗೆ ರಜೆ ಇದ್ದ ಕಾರಣಕ್ಕೆ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಬಂದು ದುರ್ಘಟನೆ ನಡೆದಿದೆ.
ಈ ವಿಷಯ ತಿಳಿದು ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃಹದೇಹಗಳು ಹೊರ ತೆಗೆದಿದ್ದಾರೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.7ರಂದು ಚಂದ್ರಗ್ರಹಣ ಹಿನ್ನಲೆ: ಬೆಂಗಳೂರಿನ ಗವಿಗಂಗಾಧರ ದೇವಾಲಯ ಬೆಳಗ್ಗೆ 11 ಗಂಟೆಗೆ ಬಂದ್
BREAKING: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ