ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಕಾವ್ಯ (26) ಕ್ರಿಮಿನಾಶ ಸೇವಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಹಾಸನ ಮೂಲದ ಯುವಕನ ಜೊತೆಗೆ ಕಾವ್ಯಾಗೆ ಮದುವೆ ಫಿಕ್ಸ್ ಆಗಿತ್ತು. ಯುವಕನ ಮನೆಯವರು ಮದುವೆ ಕ್ಯಾನ್ಸಲ್ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ಕಾವ್ಯಾ ಕ್ರಿಮಿನಾಶ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.