ಕೋಲಾರ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಸೀಮೆಎಣ್ಣೆ ಸುರಿದುಕೊಂಡು ತಾಯಿ,ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ನಡೆದಿದೆ.
ಅರಿಕೆರೆ ಗ್ರಾಮದ ಬಳಿ ಕೋಳಿಫಾರಂನಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರಶ್ಮಿಪ್ರಿಯ (34) ಹಾಗೂ ಪ್ರಭಾತ್ (7) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿ ದೀಪಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.