ಬೆಂಗಳೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಹೋಗಿದ್ದು ಸಂತೋಷ. ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂಬುದಾಗಿ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾವನ್ನು ನಿಸಾರ್ ಅಹ್ಮದ್ ಉದ್ಘಾಟಿಸಿದಾಗ ಏಕೆ ಹೋಗಿಲ್ಲ? ಟಿಪ್ಪು, ಹೈದರಾಲಿ ದಸರಾ ಮಾಡಿದಾಗ ಪ್ರಶ್ನಿಸಲಿಲ್ಲ. ಮಿರ್ಜಾ ಇಸ್ಮಾಯಿಲ್ ಅಂಬಾರಿ ಮೇಲೆ ಮೆರವಣಿಗೆ ಮಾಡಲಾಯಿತು. ಆಗ ಯಾಕೆ ವಿರೋಧಿಸಿಲ್ಲ ಎಂಬುದಾಗಿ ಕಿಡಿಕಾರಿದರು.
ಅಂದಹಾಗೇ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇಂತಹ ರಾಜ್ಯ ಸರ್ಕಾರದ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.