ಬೆಂಗಳೂರು: ರಾಜ್ಯದ ವಿವಿಧ ಸ್ಥಳಗಳಲ್ಲಿ ಸಂಭವಿಸಿದ ಜಲ ದುರಂತದಲ್ಲಿ 7 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರ, ಕುಂದಾಪುರ ಮತ್ತು ಶಿರಸಿ ತಾಲೂಕಿನಲ್ಲಿ ಭಾನುವಾರ ಸಂಭವಿಸಿದ ಮೂರು ಜಲ ದುರಂತ ಪ್ರಕರಣಗಳಲ್ಲಿ 7 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಈಜಲು ಹೋದ 9 ಮಂದಿ ಕಾಲೇಜು ಸ್ನೇಹಿತರ ಪೈಕಿ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಕೆರೆಯಲ್ಲಿ ಈಜಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿರುವ ಘಟನೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅವೈರಹಳ್ಳಿ ಹೊಸ ಕೆರೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಶಿರಸಿತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜುವಾಗ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದಾರೆ. ಇವರು ಶಿರಸಿಯ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದಾರೆ.