ನವದೆಹಲಿ: ನಾಳೆ ನಾನು, ನಮ್ಮ ವಿಪಕ್ಷ ನಾಯಕರು, ಪಕ್ಷದ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನ ಗಲಭೆಕೋರರನ್ನು ಕೂಡಲೇ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು. ಹಲವರಿಗೆ ಗಂಭೀರ ಗಾಯಗಳಾಗಿವೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಅವರನ್ನು ಮತ್ತು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದೇವೆ ಎಂದು ನುಡಿದರು.
ಮದ್ದೂರಿಗೆ ತೆರಳಿ ಹಿಂದೂ ಸಮಾಜಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದು ನುಡಿದರು.
ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರ ಹೇಳಿಕೆ ಗಮನಿಸಿದರೆ ಮೈ ಉರಿಯುತ್ತದೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿªರು ಹೇಳಿಕೆ ನೀಡುತ್ತಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಅಪಘಾತದಲ್ಲಿ ಮಗು ಅಂಗವಿಕಲವಾದರೆ 4 ಪಟ್ಟು ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ