ಬೆಂಗಳೂರು: ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದಂತ ಅರ್ಜಿಗೆ ಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಹೀಗಾಗಿ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲೇ ಗತಿಯಾದಂತೆ ಆಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಅವರು, ಬಳ್ಳಾರಿ ಜೈಲಿಗೆ ವರ್ಗಾವಣೆ ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ನ್ಯಾಯಪೀಠವು ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ನಿರಾಕರಿಸಿದೆ. ಹೀಗಾಗಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾದಂತೆ ಆಗಿದೆ.
ಇನ್ನೂ ನಟ ದರ್ಶನ್ ಅವರಿಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಜೈಲು ಕೈಪಿಡಿಯಂತೆ ಅನುಮತಿ ನೀಡಿದೆ. ಜೊತೆಗೆ ಜೈಲಿನ ಒಳಗಡೆ ಓಡಾಡಲು ಅನುಮತಿ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ವರ್ಗಾವಣೆ ಸಂಬಂಧ ಜೈಲು ಕೈಪಿಡಿಯಂತೆ ಐಜಿ ತೀರ್ಮಾನಿಸಲಿದ್ದಾರೆ ಎಂಬುದಾಗಿಯೂ ತಿಳಿಸಿದೆ.