ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು, ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ವರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ಕೃತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು.
ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಉಲ್ಲೇಖಿತ-3ರ ಪ್ರಕಟಣೆ ದಿನಾಂಕ: 26/08/2025ರಲ್ಲಿ ತಿಳಿಸಿರುವಂತೆ ಈ ಕೆಳಕಂಡ ಅನುಬಂಧ-2 ರಲ್ಲಿರುವಂತೆ ಪರಿಷ್ಕರಿಸಿದೆ. ಉಳಿದಂತೆ ವರ್ಗಾವಣಾ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು ಎಂದಿದೆ.
BREAKING: ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್
ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ: ವಾಕ್ ಮಾಡಲು ಅವಕಾಶ