ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವಂತ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 2 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದಾರೆ. ಇಂತಹ ಅವರು ತಮ್ಮ ಪುತ್ರನ ಶಸ್ತ್ರ ಚಿಕಿತ್ಸೆಗೆ ಮೂರು ದಿನ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ