ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ.
ಅಭ್ಯರ್ಥಿಗಳು ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಶೇಕಡ 55% ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. ಎನ್‍ಸಿಟಿಇ ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು. (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed.//ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.
ಈ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಬಿ.ಎಡ್. ಸಾಮಾನ್ಯ ಪರೀಕ್ಷೆಯನ್ನು ಬರೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯು ಸೆÀಪ್ಟೆಂಬರ್ 28 ರಂದು ನಿಗದಿ ಆಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.