ಬೆಂಗಳೂರು :ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.
ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಕಡ್ಡಾಯ
6 ವರ್ಷ ಮೇಲ್ಪಟ್ಟು ಪಡಿತರ ಚೀಟಿ ಇಲ್ಲದಿರುವ ಮತ್ತು ಪಡಿತರ ಚೀಟಿಯಲ್ಲಿ ಹೆಸರು ಇಲ್ಲದಿರುವ ಕುಟುಂಬದ ಸದಸ್ಯರ ಆಧಾರ್ ಕಾರ್ಡ ಕಡ್ಡಾಯವಾಗಿದೆ.
ಆಧಾರ್ ಕಾರ್ಡ್ ಇಲ್ಲವೆಂದರೆ ಹತ್ತಿರದ ಆಧಾರ್ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ನೊಂದಣಿ ಮಾಡಿಸಿ, ನೊಂದಣಿ ಸಂಖ್ಯೆಯನ್ನು ಪಡೆಯಬೇಕು.
ಆಧಾರ್ ಕಾರ್ಡ್ ಇದ್ದು ಲಿಂಕ್ ಆಗಿರುವ ಮೊಬೈಲ್ ಪೋನ್ ನಂಬರ್ ಇಲ್ಲದಿದ್ದರೆ ಹತ್ತಿರದ ಆಧಾರ್ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿ ಈಗ ಬಳಸುತ್ತಿರುವ ಮೊಬೈಲ್ ನಂಬರ್ ಗೆ ಲಿಂಕ್ ಮಾಡಿಸಿಕೊಳ್ಳವುದು ಅವಶ್ಯಕವಾಗಿದೆ.
ಸಮೀಕ್ಷಾದಾರರು ಪಡೆಯುವ ಪ್ರಮುಖ ಮಾಹಿತಿಗಳು
1 ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ
2 ಆದಾಯ, ಮತ್ತು ಚರಾಸ್ತಿ ವಿವರಗಳು
ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು.
ಸಮೀಕ್ಷೆದಾರರಿಗೆ ಸಹಕರಿಸಿ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ