ಬೆಂಗಳೂರು: ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್ ಮತ್ತು 3 ಅಂತಸ್ತಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಓಸಿ) ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿ ಸದ, ಓಸಿ ಹೊಂದಿಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕ ನೀಡದಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಹೀಗಾಗಿ ಲಕ್ಷಾಂತರ ಜನರು ಸಮಸ್ಯೆಗೆ ಸಿಲುಕಿದ್ದರು. ಈ ಸಮಸ್ಯೆಗೆ ಸರ್ಕಾರ ಪರಿಹಾರ ನೀಡಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ವರ್ಷದಿಂದ ನಂಬಿಕೆ ನಕ್ಷೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಇದರಡಿ ಆಟೋಮೇಮೀಟರ್ ಆನ್ಲೈನ್ ತಂತ್ರಾಂಶದ ಮೂಲಕ 50*80(ನಾಲ್ಕು ಸಾವಿರ ಚದರಡಿ) ವಿಸ್ತೀರ್ಣವರೆಗಿನ ಸ್ಥಳದಲ್ಲಿ ನಿರ್ಮಿಸುವ ವಸತಿ ಕಟ್ಟಡಗಳಿಗೆ ಅರ್ಜಿ ಸಲ್ಲಿಸಿದ ದಿನವೇ ಕರಡು ನಕ್ಷೆ ಹಾಗೂ 15 ದಿನದಲ್ಲಿ ಅಂತಿಮ ನಕ್ಷೆ ಮಂಜೂರಾತಿಗೆ ಅವಕಾಶ ನೀಡಲಾಗಿದೆ.
ಈ ನಂಬಿಕೆ ನಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಪ್ರಮಾಣದ ನಿವೇಶನದಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲು ಸಹ ಮನವಿ ಮಾಡಲಾಗಿತ್ತು ಗ್ರೇಟರ್. ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಅಥವಾ ಸ್ಟಿಲ್ಟ್ ಮತ್ತು ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸದೆ ಒಸಿ ಹೊಂದಿಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್, ಚರಂಡಿ ಸಂಪರ್ಕ ನೀಡದಂತೆ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಇದರ ಅನ್ವಯ ಕಳೆದ ಆರು ತಿಂಗಳ ರಾಜ್ಯದಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳಿಗೆ ಒಸಿ ನಿರಾಕರಿಸಿ ವಿದ್ಯುತ್, ನೀರು ಸಂಪರ್ಕ ನೀಡಿರಲಿಲ್ಲ. ಇದರಿಂದಾಗಿ ಲಕ್ಷಾಂತರ ಜನ ತೊಂದರೆಗೆ ಒಳಗಾಗಿದ್ದರು.