ನವದೆಹಲಿ: ನೇಪಾಳದ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ನಡೆಸಿದೆ.
ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಹಿಂದಿರುಗಿದ ನಂತರ ಈ ಸಭೆ ನಡೆಯಿತು.
ನೇಪಾಳದಲ್ಲಿ ನಡೆದ ಹಿಂಸಾಚಾರವು ಹೃದಯ ವಿದ್ರಾವಕವಾಗಿದೆ ಮತ್ತು ಅನೇಕ ಯುವಕರು ಪ್ರಾಣ ಕಳೆದುಕೊಂಡಿರುವುದಕ್ಕೆ ನಾನು ದುಃಖಿತನಾಗಿದ್ದೇನೆ ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನೇಪಾಳದ ಸ್ಥಿರತೆ, ಶಾಂತಿ ಮತ್ತು ಸಮೃದ್ಧಿ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ ಅವರು, “ನೇಪಾಳದ ಸಹೋದರ ಸಹೋದರಿಯರು ಶಾಂತಿಯನ್ನು ಬೆಂಬಲಿಸಬೇಕು” ಎಂದು ಒತ್ತಾಯಿಸಿದರು.
“ನಾನು ಇಂದು ಹಿಮಾಚಲ ಪ್ರದೇಶ ಮತ್ತು ಪಂಜಾಬ್ನಿಂದ ಹಿಂದಿರುಗಿದ ನಂತರ, ಭದ್ರತಾ ಕುರಿತ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ನೇಪಾಳದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು. ನೇಪಾಳದಲ್ಲಿ ನಡೆದ ಹಿಂಸಾಚಾರ ಹೃದಯ ವಿದ್ರಾವಕವಾಗಿದೆ. ಅನೇಕ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ನನಗೆ ದುಃಖವಾಗಿದೆ. ನೇಪಾಳದ ಸ್ಥಿರತೆ, ಶಾಂತಿ ಮತ್ತು ಸಮೃದ್ಧಿ ನಮಗೆ ಅತ್ಯಂತ ಮಹತ್ವದ್ದಾಗಿದೆ. ಶಾಂತಿಯನ್ನು ಬೆಂಬಲಿಸುವಂತೆ ನೇಪಾಳದಲ್ಲಿರುವ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು.
ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ರಾಜೀನಾಮೆ ನೀಡಿದ್ದಾರೆ.