ಬೆಂಗಳೂರು: ನೂತನವಾಗಿ ರಚಿಸಿದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರ ಅಡಿ ವಿಸ್ತೀರ್ಣಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ(ಒಸಿ)ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (1)ರಂತೆ ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರೆ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರನ್ವಯ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7), ಕರ್ನಾಟಕ ಮುನಿಸಿಪಲ್ ಕಾಯ್ದೆ, 1976 ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಉಪಬಂಧಗಳನ್ವಯ, ಕೆಲವು ಕಟ್ಟಡಗಳಿಗೆ ಸ್ವಾಧೀನ ಪ್ರಮಾಣ ಪತ್ರ (Occupancy Certificate) ಗಳಿಂದ ವಿನಾಯಿತಿ ನೀಡುವ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ, ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೆಲವು ಕ್ರಮಗಳನ್ನು ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದೊಂದಿಗೆ ಮೇಲ್ಕಂಡ ಸಭಾ ನಡವಳಿಯನ್ನು, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇವರಿಗೆ ಕಳುಹಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ ಕಲಂ 241(7)ರಡಿಯಲ್ಲಿ 1200 ಚ.ಅಡಿ ವೀಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ+2 ಅಂತಸ್ತು ಅಥವಾ ಸ್ಟೀಲ್ಸ್+3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (occupancy certificate) ಪಡೆಯುವುದರಿಂದ ವಿನಾಯಿತಿ ನೀಡಲು ನಿಯಮಗಳನ್ನು ರಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿತ್ತು.
ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (4)ರ ಪ್ರಸ್ತಾವನೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಲಯ ಕಚೇರಿಗಳಿಂದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ, ನೀಡಲಾಗುತ್ತಿದೆ. ಪ್ರತಿ ವರ್ಷ ಈ ರೀತಿ 1200 ಚ.ಅಡಿ ಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು 4000 ಕಟ್ಟಡಗಳಿಗೆ ನಕ್ಷೆ ಮಂಜೂರಾತಿಯನ್ನು ನೀಡಲಾಗುತ್ತಿದೆ. ಕಟ್ಟಡ ನಕ್ಷೆ ಮಂಜೂರಾತಿಯನ್ನು ಕಳೆದ ಸಾಲಿನಿಂದ “ನಂಬಿಕೆ ನಕ್ಷೆ” ವ್ಯವಸ್ಥೆಯಡಿಯಲ್ಲಿ ಆಟೋಮೇಟೆಡ್ ಅನ್‌ಲೈನ್ ತಂತ್ರಾಂಶದ ಮೂಲಕ ನೀಡಲಾಗುತ್ತಿದ್ದು, ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಕರಡು ನಕ್ಷೆ ಮತ್ತು 15 ದಿನಗಳೊಳಗಾಗಿ ಅಂತಿಮ ನಕ್ಷೆ ಮಂಜೂರಾತಿಗೆ ಅವಕಾಶ ಕಲ್ಪಿಸಿದ್ದು ಇದರಿಂದಾಗಿ ಸಾರ್ವಜನಿಕರಿಗೆ ಪಾರದರ್ಶಕವಾಗಿ ಹಾಗೂ ಕಾಲಮಿತಿಯೊಳಗೆ ನಕ್ಷೆ ಮಂಜೂರಾತಿಗಳನ್ನು ನೀಡಲಾಗುತ್ತಿದೆ.
2024 ಮುಂದುವರೆದು. ಮೇಲೆ ಓದಲಾದ ಕ್ರಮ ಸಂಖ್ಯೆ (5)ರ ಅಧಿಸೂಚನೆಯನ್ವಯ, ໖໖ ໖ Greater Bengaluru Governance Act, ಚಾಲ್ತಿಯಲ್ಲಿದ್ದು, ಸದರಿ ಕಾಯ್ದೆಯಲ್ಲಿ ಕಲಂ 241(7) ರಡಿಯಲ್ಲಿ ಈ ಕೆಳಕಂಡಂತೆ ಅವಕಾಶ ಕಲ್ಪಿಸಲಾಗಿರುತ್ತದೆ.
“ಸರ್ಕಾರವು ಯಾವ ಕಟ್ಟಡದ ವರ್ಗವನ್ನು ಆಕ್ಯುಪೆನ್ಸಿ ಪ್ರಮಾಣಪತ್ರವನ್ನು ಪಡೆಯುವುದರಿಂದ ವಿನಾಯಿತಿ ನೀಡಬೇಕೆಂದು ತಿಳಿಸಬಹುದು”
ಮೇಲ್ಕಂಡ ಕಾಯ್ದೆಯ ಅವಕಾಶ ಹಾಗೂ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸಭಾ ನಡವಳಿಯಂತೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆ ಮುಂತಾದವುಗಳನ್ನು ಒಳಗೊಂಡಿರುವುದರಿಂದ, ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳಿಗೆ ಹೆಚ್ಚಿನ ಕೆಲಸದ ಹೊರೆ ಉಂಟಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕ ಅನುಕೂಲವನ್ನು ಗಮನದಲ್ಲಿರಿಸಿಕೊಂಡು ಹಾಗೂ ‘ನಂಬಿಕೆ ನಕ್ಷೆ’ ವ್ಯವಸ್ಥೆಯಲ್ಲಿ ಶೀಘ್ರವಾಗಿ ನಕ್ಷೆಗಳಿಗೆ ಮಂಜೂರಾತಿ ಮಾಡುತ್ತಿರುವುದನ್ನು ಗಮನದಲ್ಲಿರಿಸಿಕೊಂಡು, ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದರಿಂದ ವಿನಾಯಿತಿ ನೀಡಲು ಪರಿಗಣಿಸುವುದು ಸೂಕ್ತವಾಗಿರುತ್ತದೆ ಎಂದು ಅಭಿಪ್ರಾಯ ತಿಳಿಸುತ್ತಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, -2024 ಕಲಂ 241(7)ರಡಿಯಲ್ಲಿ ಸರ್ಕಾರಕ್ಕಿರುವ ಅಧಿಕಾರದಂತೆ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸುವ ನೆಲ+2 ಅಂತಸ್ತು ಅಥವಾ ಸ್ಟೀಲ್ಸ್+3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy certificate) ಪಡೆಯುವದರಿಂದ ವಿನಾಯಿತಿ ನೀಡಲು ಅಧಿಸೂಚನೆ ಹೊರಡಿಸುವಂತೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರಿಗೆ ವಿನಾಯಿತಿ ನೀಡುವುದರಿಂದ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂಬುದನ್ನು ಸರ್ಕಾರವು ಮನಗಂಡು ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.