ಮಂಡ್ಯ : ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ, ಛಲವಾದಿ ನಾರಾಯಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಲಿದ್ದಾರೆ.
ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು, ಅದಕ್ಕೂ ಮುನ್ನ ಕಲ್ಲೆಸೆತದಲ್ಲಿ ಗಾಯಗೊಂಡವರ ಮನೆಗೆ ಭೇಟಿ ಕೊಡಲಿದ್ದಾರೆ. ಸ್ಥಳೀಯರಿಗೆ ಧೈರ್ಯ ತುಂಬಲಿರುವ ಕಮಲ ನಾಯಕರು, ನಂತರ ಲಾಠಿ ಚಾರ್ಜ್ ವೇಳೆ ಗಾಯಗೊಂಡವರ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಬಿ.ವೈ.ವಿಜಯೇಂದ್ರರಿಂದ ಕಾಶಿವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತೆ. ನಂತರ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.a