ಮಂಡ್ಯ : ಇಂದು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಇಂದು ಮದ್ದೂರು ಪಟ್ಟಣದಲ್ಲಿ ಸ್ವಯಂಘೋಷಿತ ಬಂದ್ ನಡೆಸಲಾಗಿದ್ದು, ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಸಹ ಭಾಗಿಯಾಗಲಿದ್ದಾರೆ.
ಮದ್ದೂರು ಪಟ್ಟಣದಲ್ಲಿ ಇಂದು ಸಹ ಸ್ವಯಂ ಘೋಷಿತ ಬಂದ್ ಮಾಡಲಾಗಿದ್ದು, ಮೂರನೇ ದಿನವೂ ಬಂದ್ ಮುಂದುವರಿಯಲಿದೆ.
ಇಂದು ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರದಾಗಕ್ರಮವಾಗಿ 3000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂ ಘೋಷಿತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.