ಬೆಂಗಳೂರು : ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಒಂದು ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ.
• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.
• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು.
• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಯಡಿ ರೂ.900 ಕೋಟಿ ಅನುದಾನ ಬಜೆಟ್ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವ ಅಗತ್ಯ ಅನುದಾನ ಹಂಚಿಕೆ ಕುರಿತಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.