ಬೆಂಗಳೂರು : ಮದ್ದೂರಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆ ಬಿಜೆಪಿ ನಾಯಕರು ಭೇಟಿ ಕೊಟ್ಟಿದ್ದರೆ. ಈ ಒಂದು ಭೇಟಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಿಜೆಯವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಉರಿಗೌಡ, ನಂಜೇಗೌಡ ಕಥೆ ಕಟ್ಟಿದ್ರಲ್ಲ, ಎಲ್ಲಿ ಹೋದ್ರು ಅವರು, ಅಮಾಯಕರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಬೇಡಿ. ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ. ಬಡವರ ಮಕ್ಕಳನ್ನು ಯಾಕೆ ಬಳಸಿಕೊಳ್ತೀರಿ? ಕಲ್ಲು ತೂರಾಟ ಕೇಸ್ ಬಗ್ಗೆ ತನಿಖೆ ಆಗ್ತಿದೆ 21 ಜನರ ಬಂಧನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿ ಕಾರಿದರು.
ಬಿಜೆಪಿ ನಾಯಕರಿಂದ ಕೇಂದ್ರ ಸಚಿವ ಅಮಿತ ಶಾ ಭೇಟಿ ವಿಚಾರವಾಗಿ ಅಮಿತ್ ಶಾ ಯಾವುದೇ ಕೇಸ್ CBI ಗೆ ಕೊಡಬೇಡಿ ಎಂದಿದ್ದಾರೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ನಮ್ಮ ಬಳಿ ಸಿಬ್ಬಂದಿ ಇಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇವಾಗ ಅಮಿತ್ ಶಾ ಬಳಿ ಹೋಗಿ ಎನ್ ಹೇಳುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದರು.