ಬೆಂಗಳೂರು : ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಂದು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೇ. ಟಿ.ಬೇಗೂರಿನಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗು ಆಸ್ಪತ್ರೆಯಲ್ಲಿ ಕಾರ್ಮಿಕ ಆತ್ಮಹತ್ಯೆ ಶರಣಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೆಗೂರಲ್ಲಿ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೆಗೌಡ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎಂಟು ವರ್ಷದಿಂದ ತಿಮ್ಮೇಗೌಡ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದ್ದು, ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ತಿಮ್ಮೆಗೋಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಶರಣರ ತಿಮ್ಮೇಗೌಡ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿಯವರು ಎಲೆಕ್ಟ್ರಿಷಿಯನ್ ತಿಮ್ಮೇಗೌಡ ಮಾತೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.