ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇದೀಗ ಪ್ರತಿಭಟನಾ ಸ್ಥಳದಲ್ಲಿ ಯುವಕರು ಅಸ್ವಸ್ಥರಾಗಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಸಮುದಾಯದವರಿಂದ ಒಳ ಮೀಸಲಾತಿ ಜಾರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾ ನಿರತ ಹೋರಾಟಗಾರರು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬ್ಯಾರಿಕೇಡ್ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರೂ, ಬ್ಯಾರಿಕೇಟ್ ಮುರಿದು ರೋಷಾವೇಶವನ್ನು ಹೊರ ಹಾಕಿದ್ದಾರೆ. ಈ ಸಂದರ್ಭದಲ್ಲಿಯೇ ನೂಕು ನುಗ್ಗಲು ಉಂಟಾದ ಪರಿಣಾಮ, ಕೆಲ ಯುವಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ.ಪಾಟೀಲ್
BREAKING: ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ