ಬೆಂಗಳೂರು ಗ್ರಾಮಾಂತರ: ಇಲ್ಲಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರಿನಲ್ಲಿರುವಂತ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 8 ವರ್ಷದಿಂದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸವನ್ನು ತಿಮ್ಮೇಗೌಡ ಮಾಡುತ್ತಿದ್ದರು. ಇಂತಹ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದೆ.
ತಿಮ್ಮೇಗೌಡ ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದಂತ ತಿಮ್ಮೇಗೌಡ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು. ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
BREAKING: ಬೆಂಗಳೂರಲ್ಲಿ ಒಳಮೀಸಲಾತಿ ಪ್ರತಿಭಟನೆ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದ ಯುವಕರು
BREAKING: ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ