ಚಿತ್ರದುರ್ಗ: ಹಾಲು ಉತ್ಪಾದಕರ ಪರಿಶ್ರಮ ಹಾಗೂ ಸಿಬ್ಬಂದಿಯ ಪ್ರಾಮಾಣಿಕತೆಯಿಂದಲೇ ಇಂದು ಹಾಲಿನ ಡೈರಿಗಳು ಅಭಿವೃದ್ಧಿಯತ್ತ ಸಾಗಲಿಕ್ಕೆ ಅನುಕೂಲವಾಗುತ್ತಿದೆ ಎಂದು ಹೊಸದುರ್ಗದ ಶಿಮೂಲ್ ನಿರ್ದೇಶಕ ಬಿಆರ್ ರವಿಕುಮಾರ್ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಆಲಘಟ್ಟ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಹಮ್ಮಿಕೊಂಡಿದ್ದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ಹಾಲು ಉತ್ಪಾದಕರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಜೊತೆಗೆ ಹಾಲು ಉತ್ಪಾದನೆ ಕಡಿಮೆಯಾಗದಂತೆ ಉತ್ಪಾದಕರು ಗಮನಹರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಲಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ಚಿತ್ರದುರ್ಗ ಶಿಮೂಲ್ ಉಪವಿಭಾಗಾಧಿಕಾರಿ ಡಾ. ಮುಕುಂದ್ ನಾಯ್ಕ್ , ವಿಸ್ತರಣಾಧಿಕಾರಿ ಜಿ. ರವಿಚಂದ್ರನ್, ಸಿಡಿಒ ರಾಮು, ಆಲಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸ್ಸು