ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಪುನೀತ್ ಕೆರೆಹಳ್ಳಿ ಬಂಧಿಸಲಾಗಿದೆ.
ಮಂಡ್ಯದ ಮದ್ದೂರಲ್ಲಿ 20ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಕಲ್ಲು ತೂರಾಟ ಘಟನೆಯ ನಂತ್ರ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು. ಇಂತಹ ಮದ್ದೂರಿಗೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಠಾಣೆಯ ಪೊಲೀಸರು ಪುನೀತ್ ಕೆರೆಹಳ್ಳಿ ಬಂಧಿಸಿದ್ದಾರೆ.
ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ದಂಡಾಧಿಕಾರಿ ಆರೋಪಿ ಪುನೀತ್ಗೆ ಸೂಚನೆ ನೀಡಿದ್ದರು. ಆದರೆ, ಮುಚ್ಚಳಿಕೆ ಬರೆದುಕೊಡಲು ಪುನೀತ್ ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.