ಕೊಪ್ಪಳ : ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವಕನ ಲವ್ ಮಾಡಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತರನ್ನು ಪುಷ್ಪವತಿ (23) ಎಂದು ಗುರುತಿಸಲಾಗಿದೆ. 2 ದಿನಗಳ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ.
ಹಾಸನ ಮೂಲದ ಪುಷ್ಪವತಿ ಇನ್ ಸ್ಟಾ ಮೂಲಕ ಮರಿಯಪ್ಪ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು.ಇವರಿಗೆ ಮೂರು ತಿಂಗಳ ಮಗು ಕೂಡ ಇತ್ತು.ಆದರೆ ಇದ್ದಕ್ಕಿದ್ದಂತೆ ಪುಷ್ಪವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತಿ ಮನೆಯವರೇ ಪುಷ್ಪರನ್ನು ಕೊಲೆ ಮಾಡಿ ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.