ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್ನಲ್ಲಿ ಅಪ್ರಾಪ್ತ ಯುವತಿಗೆ ಚಾಲಕನೊಬ್ಬ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಚಾರ ತಿಳಿದು ಚಾಲಕನಿಗೆ ಯುವತಿಯ ಪೋಷಕರು ಹಿಗ್ಗಾಮುಗ್ಗ ಥಳಿಸಿದ್ದಾರೆ.
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಅಪ್ರಾಪ್ತೆ ಗೆ ಚಾಲಕ ಕಿರುಕುಳ ನೀಡಿದ್ದಾನೆ ಬಸ್ ಡ್ರೈವರ್ ಬಳಿ ಯುವತಿ ಮೊಬೈಲ್ ಚಾರ್ಜ್ ಗೆ ಹಾಕಿದ್ದಳು ಕಿಸ್ ಕೊಟ್ಟರೆ ಮೊಬೈಲ್ ಕೊಡುತ್ತೇನೆ ಅಂತ ಬಸ್ ಚಾಲಕ ಆರಿಫ್ ಹೇಳಿದ್ದಾನೆ. ಸ್ಪೇರ್ ಡ್ರೈವರ್ ಆರಿಫ್ ನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಈ ವಿಚಾರವಾಗಿ ಯುವತಿ ತನ್ನ ಅಣ್ಣನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ.