ಬೆಂಗಳೂರು : ಬೆಂಗಳೂರು ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆಯ ವಿಚಾರವಾಗಿ, ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇದೀಗ ಬಂಪರ್ ಗಿಫ್ಟ್ ನೀಡಿದ್ದು, ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ವಿಶೇಷ ಅನುದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ರಸ್ತೆಗಳತ್ತ ಗಮನ ಹರಿಸಲು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇದೇ ವೇಳೆ ಸೂಚನೆ ನೀಡಿದರು. ಸಭೆಯಲ್ಲಿ ಬೆಂಗಳೂರು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಗರಕ್ಕೆ ಒಟ್ಟು 1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೂಲಭೂತ ಸೌಕರ್ಯ ಯೋಜನೆಗೆ ಒತ್ತು ನೀಡಲು ಶಾಸಕರಿಗೆ ಸೂಚನೆ ನೀಡಿದ್ದಾರೆ.