ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆ ಹುತಾತ್ಮರಾದಂತ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.
ಇಂದು ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ವೇಳೆಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈವರೆಗೆ 62 ಮಂದಿ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ, ಕಳ್ಳಬೇಟೆಗಾರರನ್ನು ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ಸಂದರ್ಭದಲ್ಲಿ, ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆಯಲ್ಲಿ ಇವರೆಲ್ಲ ಬಲಿಯಾಗಿದ್ದಾರೆ ಎಂದರು.
ರಾಜ್ಯದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.