ಬೆಂಗಳೂರು : ಬೆಂಗಳೂರಲ್ಲಿ ಪದೇ ಪದೇ ಕನ್ನಡ ಹಾಗು ಕನ್ನಡಿಗರ ಬಗ್ಗೆ ಕೀಳು ಭಾವನೆ ತೊರ್ಪಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಆಂಗ್ಲ ಭಾಷೆಯಲ್ಲಿ ಮಾತ್ರ ಮಾತನಾಡುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದು, ಕನ್ನಡ ಮಾತಾಡಿದ್ರೆ ದಂಡ ವಿಧಿಸುವ ಎಚ್ಚರಿಕೆ ಹಾಕಿರುವ ಘಟನೆ ವರದಿಯಾಗಿದೆ.
ಹೌದು ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆ ಆಡಳಿತ ಮಂಡಳಿ ವಿರುದ್ಧ ಈ ಒಂದು ಆರೋಪ ಕೇಳಿಬಂದಿದೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆಯಲಾಗಿದೆ. ಸಿಂಧಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ಪತ್ರ ಬರೆದು ಸೂಚಿಸಲಾಗಿದೆ.
ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ. 1 ವಾರದೊಳಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ನೀಡಲು ಸೂಚನೆ ನೀಡಿದ್ದಾರೆ.ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಸಿಂಧಿ ಪ್ರೌಢಶಾಲೆ ಆಡಳಿತ ಮಂಡಳಿ ನಕಾರ ವ್ಯಕ್ತಪಡಿಸಿದೆ.