ಬೆಂಗಳೂರು : ನಿನ್ನೆ ತುಮಕೂರಿನ ತಿಪಟೂರಲ್ಲಿ ABVP ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಭಾಗಿಯಾಗಿರುವ ಕುರಿತು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗೃಹ ಸಚಿವ ಜಿ.ಪರಮೇಶ್ವರ್ ರಾಣಿ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಜಿ.ಪರಮೇಶ್ವರ್ ರಾಣಿ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ. ಇದರಲ್ಲಿ ರಾಜಕಾರಣ ಮಾಡುವಂತದ್ದು, ಏನು ಇಲ್ಲ ಈ ವಿಚಾರದ ಬಗ್ಗೆ ಹೈಕಮಾಂಡ್ ಗೆ ದೂರು ಕೊಡೋದೆಲ್ಲ ತಪ್ಪು. ರಥಯಾತ್ರೆ ಬಗ್ಗೆ ಎಬಿವಿಪಿಯವರು ನಮಗೆ ಮಾಹಿತಿ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದರು.