ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭಾವಿಸಿದ್ದು, ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಬೈಕ್ ಸವಾರರು ಬೆಳಗಾವಿ ಮೂಲದ ಆದಂ (52) ಕಿರಣ್ (35) ಎಂದು ತಿಳಿದುಬಂದಿದೆ. ಇಬ್ಬರೂ ಹಾವೇರಿ ಜಿಲ್ಲೆಯ ಬಂಕಾಪುರಕ್ಕೆ ತೆರಳುತ್ತಿದ್ದರು. ಅಪಘಾತದ ಕುರಿತಂತೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.