ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಕೈ ಮಾಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಮಹಿಳೆಯ ಮೇಲೆ ಕೈ ಮಾಡಿದ್ದಂತ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಅನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಬೆಂಗಳೂರಲ್ಲಿ ಕೆಎ 51, ಎಕೆ 4276 ಸಂಖ್ಯೆಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನೊಬ್ಬ ಮಹಿಳೆಯ ಮೇಲೆ ಕೈ ಮಾಡಿದ್ದರು. ಸೆಪ್ಟೆಂಬರ್.8ರಂದು ಪೀಣ್ಯದಿಂದ ಬಾಣಾವರಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಗಲಾಟೆ ನಡೆದಾಗ ಈ ಘಟನೆ ಸಂಭವಿಸಿತ್ತು.
ಈ ಗಲಾಟೆಯ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರು ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು. ಆ ಬಳಿಕ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ಕೂಡ ಕೈ ಮಾಡಿದ್ದನು. ಹೀಗೆ ಹಲ್ಲೆ ಮಾಡಿದ್ದಂತ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನನ್ನು ಕೆಲಸದಿಂದ ತಾತ್ಕಾಲಿಕವಾಗಿ ವಜಾ ಮಾಡಿ ಬಿಎಂಟಿಸಿ ಆದೇಶಿಸಿದೆ.