ಬೆಂಗಳೂರು: ಅಕ್ರಮ ಆಸ್ತಿ ಪತ್ತೆ ಆರೋಪದಡಿ ಇಡಿ ಅಧಿಕಾರಿಗಳಿಂದ ಶಾಸಕ ಸತೀಶ್ ಸೈಲ್ ಬಂಧಿಸಲಾಗಿತ್ತು. ಇಂತಹ ಅವರಿಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳಊರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.