ಮಂಡ್ಯ : ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ತೆಗೆದುಕೊಳ್ಳದಿದ್ದರೆ ಜೆಸಿಬಿ ಗುರುತಿನ ಕರ್ನಾಟಕ ಹಿಂದೂ ಪಕ್ಷ ಹೆಸರಿನಲ್ಲಿ ಹೊಸ ಪಕ್ಷ ಕಟ್ಟುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಘೋಷಿಸಿದ್ದಾರೆ.
ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಜಾಥಾ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಸಿಎಂ ಆಗಿ ಮುಸ್ಲಿಮರ ಮೀಸಲಾತಿ ತೆಗೆದು ಹಿಂದೂಗಳಿಗೆ ಹಂಚುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೇ ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಮಾಜಿ ಸಂಸದ ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿಯಾಗಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.
ನಾನು ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಾಡುವವರು ಒಂದು ಗತಿ ಕಾಣಿಸುತ್ತೇನೆ. ವಕ್ಫ್ ಅನುದಾನ ಗೋರಕ್ಷಕರಿಗೆ ನೀಡುತ್ತೇನೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮಸೀದಿ ಮುಂದೆ ಗಂಟೆಗಟ್ಟಲೆ ಡ್ಯಾನ್ಸ್ ಮಾಡಲು ಅವಕಾಶ ಕೊಡುತ್ತೇನೆ ಎಂದು ಹೇಳಿದ್ದಾರೆ.