ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದನ್ನು ಕಾಣಲಾಗಿದೆ. ಇದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.
ಬುಧವಾರ(ಸೆ.10) ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಿ, ಕರೆ ಬಂದ ಕೂಡಲೇ ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಬೀದಿನಾಯಿ, ಸಾಕು ನಾಯಿಗಳಿಗೆ ಎಆರ್‍ಯು ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು. ಮನೆ ಮನೆಗೆ ತೆರಳಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನ್ ನೀಡಬೇಕು. ಎಬಿಸಿ ಕಾರ್ಯಕ್ರಮ ಮಾಡಲು ನಗರಾಭಿವೃದ್ದಿ ಕೋಶ, ಮಹಾನಗರಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲಾ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನ ಹರಣ ಚಿಕಿತ್ಸೆ ನೀಡುವಂತೆ ತಿಳಿಸಿದರು.
ಪ್ರಕರಣದ ಆಧಾರದ ಮೇರೆಗೆ ಗಂಭೀರ ಅನಾರೋಗ್ಯ ಅಥವಾ ಮಾರಣಾಂತಿಕವಾಗಿ ಗಾಯಗೊಂಡ ಅಥವಾ ಹುಚ್ಚುರೋಗ ಪೀಡಿತ ನಾಯಿಗಳನ್ನು ಸೋಡಿಯಂ ಪೆಂಟಾಥಾಲ್ ಬಳಸಿ ನೋವುರಹಿತ ವಿಧಾನದಲ್ಲಿ ದಯಾಮರಣ ನೀಡಬೇಕು. ಬೇರೆ ಯಾವುದೇ ವಿಧಾನವನ್ನು ಕಟ್ಟುನಿಟ್ಟಾಗಿ ನಿμÉೀಧಿಸಲಾಗಿದೆ. ಪ್ರತಿ ಪ್ರಾಣಿಯನ್ನು ದಯಾಮರಣಕ್ಕೆ ಒಳಪಡಿಸಲು ಲಿಖಿತವಾಗಿ ಕಾರಣಗಳನ್ನು ದಾಖಲಿಸಬೇಕು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲಸೌಕರ್ಯಗಳು ಇರಬೇಕು. ಹೊಸ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುವ ಮೊದಲು ಉದ್ದೇಶಿತ ಪ್ರದೇಶದಲ್ಲಿ ನಾಯಿಗಳ ಜನನ ನಿಯಂತ್ರಣವನ್ನು ಹಂತ ಹಂತವಾಗಿ ಕೈಗೊಳ್ಳಲು ಮೂಲಸೌಕರ್ಯವನ್ನು ವಿನ್ಯಾಸಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿರುವ ಎಲ್ಲಾ ನಾಯಿಗಳಿಗೆ ಉಚಿತ ಲಸಿಕೆ ಹಾಕಲು ಲಸಿಕಾ ಅಭಿಯಾನವನ್ನು ಸೆ.28 ರಿಂದ ಅ.27 ರವರೆಗೆ ಹಮ್ಮಿಕೊಳ್ಳಲಾಗಿದೆ. ಹಾಗೂ ಶಾಲೆಗಳಲ್ಲಿ ಪಶುಪಾಲನಾ ಇಲಾಖೆಯಿಂದ ರೇಬಿಸ್ ಅರಿವು ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದರು.
ಜಿ.ಪಂ ಸಿಇಓ ಗಿತ್ತೆ ಮಾಧವ್ ವಿಠ್ಠಲ್ ರಾವ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಪಶುಪಾಲನಾ ಇಲಾಖೆ ಡಿಡಿ. ಡಾ;ಮಹೇಶ್.ಹೆಚ್.ಎಂ, ಡಿಹೆಚ್‍ಓ ಡಾ;ಷಣ್ಮುಖಪ್ಪ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ಉಪಸ್ಥಿತರಿದ್ದರು.