ಬೆಂಗಳೂರು : ನೇಪಾಳದಲ್ಲಿ ಸಿಲುಕಿದ ಕನ್ನಡಿಗರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ 7:30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 39 ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನೇಪಾಳದಿಂದ ದೆಹಲಿ ದೆಹಲಿಯಿಂದ ಬೆಂಗಳೂರಿಗೆ ಕನ್ನಡಿಗರು ಬಂದು ಇಳಿದಿದ್ದಾರೆ. ಇಶಾ ಫೌಂಡೇಶನ್ ಜೊತೆಗೆ ತೆರಳಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿದುಬಂದಿದೆ.