ಬೆಂಗಳೂರು : ರಾಜ್ಯದಲ್ಲಿ ಈಗ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಹೀಗಾಗಿ ಬಿಜೆಪಿಯವರು ಕರಾವಳಿ ಭಾಗದಿಂದ ಮೈಸೂರು ಭಾಗದ ಕಡೆಗೆ ಬಂದಿದ್ದಾರೆ. ಬಿಜೆಪಿಯವರು ಅವರ ಮಕ್ಕಳನ್ನು ಮುಂದೆ ಬಿಟ್ಟು ಹೋರಾಟ ಮಾಡಲಿ ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಾಧಾರಿತ ರಾಜಕಾರಣ ಮಾಡುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ ಹೀಗಾಗಿ ಮೈಸೂರು ಭಾಗಕ್ಕೆ ಬಂದಿದ್ದಾರೆ. ಹಣಕೊಟ್ಟು ಹೋರಾಟಕ್ಕೆ ಕರೆಸಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. ಶೂದ್ರರೂ ಹಾಗೂ ಹಿಂದುಳಿದವರನ್ನು ಹೋರಾಟಕ್ಕೆ ಮುಂದೆ ಬಿಡುತ್ತಾರೆ. ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.