ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದು, ಇದನ್ನು ಅಧಿಕೃತವಾಗಿ ದೃಢಪಡಿಸಲಾಗಿದೆ. ಮಣಿಪುರದ ಮುಖ್ಯ ಕಾರ್ಯದರ್ಶಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯವರ ಮಣಿಪುರ ಭೇಟಿ ಶಾಂತಿ ಮತ್ತು ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
ಸೆಪ್ಟೆಂಬರ್ 13ರ ಶನಿವಾರ ಮಧ್ಯಾಹ್ನ 12:15ಕ್ಕೆ ಪ್ರಧಾನಿ ಮೋದಿ ಮಿಜೋರಾಂ ರಾಜಧಾನಿ ಐಜ್ವಾಲ್’ನಿಂದ ಮಣಿಪುರದ ಚುರಚಂದಪುರ ತಲುಪಲಿದ್ದಾರೆ. ಮೊದಲನೆಯದಾಗಿ, ಚುರಚಂದಪುರದಲ್ಲಿ, ಅವರು ಸ್ಥಳಾಂತರಗೊಂಡ ಜನರೊಂದಿಗೆ ಸಂವಹನ ನಡೆಸಲಿದ್ದಾರೆ ಮತ್ತು ಮೂಲಸೌಕರ್ಯ ಯೋಜನೆಯ ಅಡಿಪಾಯ ಹಾಕಲಿದ್ದಾರೆ.
ಮೇ 2023ರಲ್ಲಿ ಮೈಟೈ ಮತ್ತು ಕುಕಿ ಬುಡಕಟ್ಟು ಜನಾಂಗದ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಮಣಿಪುರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ.
Solar Eclipse: ಇದೇ ತಿಂಗಳು ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ! ಭಾರತದಲ್ಲಿ ಗೋಚರವಾಗುತ್ತಾ ?
Solar Eclipse: ಇದೇ ತಿಂಗಳು ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ! ಭಾರತದಲ್ಲಿ ಗೋಚರವಾಗುತ್ತಾ ?
BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ