ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿತ್ತು. ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ಸೆಪ್ಟೆಂಬರ್.15ಕ್ಕೆ ವಿಚಾರಣೆ ನಡೆಸಲು ನಿಗದಿ ಪಡಿಸಲಾಗಿದೆ.
ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪಿಐಎಲ್ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ.
ಸೆಪ್ಟೆಂಬರ್.15ರಂದು ಮಾಜಿ ಸಂಸದ ಪ್ರತಾಪ್ ಸಿಂಹ, ಟಿ.ಗಿರೀಶ್ ಕುಮಾರ್, ಹೆಚ್.ಎಸ್ ಗೌರವ್ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಯಲಿದೆ. ದಸರಾ ಉದ್ಘಾಟನೆ ಹಿಂದೂ ಸಂಪ್ರದಾಯದಂತೆ ನಡೆಯಬೇಕು. ಸರ್ಕಾರ ನೀಡಿರುವ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ಕೋರಲಾಗಿದೆ.
BREAKING: ನೇಪಾಳದ ನೂತನ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ | Sushila Karki take oath
BREAKING: ಬಾಲಿವುಡ್ ನಟಿ ದಿಶಾ ಪಟಾನಿ ಮನೆಯ ಬಳಿ ಗುಂಡಿನ ದಾಳಿ | Actress Disha Patani