ಬೆಂಗಳೂರು: ಹಾಸನದಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಲಾರಿ ಹರಿದು ಘೋರ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ತಲಾ 5. ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ…
— Siddaramaiah (@siddaramaiah) September 12, 2025
ಅಂದಹಾಗೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಲಾರಿ ಹರಿದು 8 ಮಂದಿ ಸ್ಥಳಗಳಲ್ಲೇ ಸಾವನ್ನಪ್ಪಿದ್ದಾರೆ. 26ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.







