ಹಾಸನ : ನಿನ್ನೆ ತಡರಾತ್ರಿ ಹಾಸನ ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ 373 ರ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನ ಮೃತಪಟ್ಟಿದ್ದಾರೆ. ದುರಂತಕ್ಕೆ ಟ್ರಕ್ ಚಾಲಕ ಭುವನ್ ಅವರ ಬೇಜವಾಬ್ದಾರಿ ತನವೇ ಕಾರಣ. ಅಲ್ಲದೆ, ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ, ಹೀಗಾಗಿ ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರೂ ಸಹ ಪತ್ರ ಬರೆಯಲಿದ್ದಾರೆ. ಅಲ್ಲದೆ, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆ ಪತ್ರದಲ್ಲಿ ಒತ್ತಾಯಿಸಲಾಗುತ್ತೆ ಎಂದು ತಿಳಿದುಬಂದಿದೆ.
ಈಗಾಗಲೇ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆದಂತಹ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿದ್ದಾರೆ ಈ ವೇಳೆ ಸ್ಥಳೀಯರು ಭಟ್ಟವರು ಎಲ್ಲರೂ ಕೂಡ ಬಡವರಾಗಿದ್ದು ಪರಿಹಾರ 5 ಲಕ್ಷ ಸಾಕಾಗಲ್ಲ ಪರಿಹಾರ ಮೊತ್ತ ಹೆಚ್ಚಿಗೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ ಸ್ಥಳೀಯರ ಮನವಿಗೆ ಸಚಿವ ಕೃಷ್ಣಭರೇಗೌಡ ಸ್ಪಂದನೆ ನೀಡಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.