Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವ ವಿಖ್ಯಾತ ಮೈಸೂರು ದಸರಾ : ಪ್ರಮೋದಾ ದೇವಿ ಒಡೆಯರ್‌ ಗೆ ಅಧಿಕೃತ ಆಹ್ವಾನ

14/09/2025 1:52 PM

ಗಮನಿಸಿ : `SMS, ವಾಟ್ಸಾಪ್ ಅಥವಾ ಮಿಸ್ಡ್ ಕಾಲ್ ಮೂಲಕ ನಿಮ್ಮ `PF’ ಬ್ಯಾಲೆನ್ಸ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

14/09/2025 1:47 PM

EPFO ಹೊಂದಿರುವವರಿಗೆ ಗುಡ್‌ ನ್ಯೂಸ್‌! ಇನ್ಮೇಲೆ ಹಣ ಹಿಂಪಡೆಯೋದು ಮತ್ತಷ್ಟು ಸುಲಭ

14/09/2025 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ ಸಕ್ಕರೆ ಕಾರ್ಖಾನೆ ಮುಚ್ಚಲು ಸಾಧ್ಯವಿಲ್ಲ, ಲಾಭದಾಯಕವಾಗಿಸಲು ಕ್ರಮ : CM ಸಿದ್ಧರಾಮಯ್ಯ
KARNATAKA

ಮಂಡ್ಯ ಸಕ್ಕರೆ ಕಾರ್ಖಾನೆ ಮುಚ್ಚಲು ಸಾಧ್ಯವಿಲ್ಲ, ಲಾಭದಾಯಕವಾಗಿಸಲು ಕ್ರಮ : CM ಸಿದ್ಧರಾಮಯ್ಯ

By kannadanewsnow5714/09/2025 6:33 AM

ಮಂಡ್ಯ : ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಿದೆ. ಅಧಿಕಾರಕ್ಕೆ ಬಂದ ಕೂಡಲೇ 50 ಕೋಟಿಗಳನ್ನು ಒದಗಿಸಿ, ನಂತರ 52  ಕೋಟಿ ರೂ.ಗಳ ವಿದ್ಯುತ್ ಶಕ್ತಿಯ ಬಾಕಿ ಬಿಲ್‌ ಅನ್ನು ಮನ್ನಾ ಮಾಡಲಾಯಿತು. ಇದಲ್ಲದೆ 10 ಕೋಟಿಯನ್ನು ಮತ್ತೆ ಒದಗಿಸಲಾಗಿದೆ. ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ನಷ್ಟವಿಲ್ಲದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಇದಕ್ಕೆ ಅಗತ್ಯವಿರುವ ಬಾಯ್ಲಿಂಗ್ ಹೌಸ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು.

ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಪ್ರಕೃತಿ ಸೌಂದರ್ಯವನ್ನು ಜನರು ಕಾಣಲು ಬರಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜಲಪಾತೋತ್ಸವವನ್ನು ಆಚರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಅನೇಕ ನದಿಗಳಿವೆ. ಕಾವೇರಿ, ಕೃಷ್ಣಾ, ತುಂಗಭದ್ರೆ, ಶರಾವತಿ ನದಿಗಳು ನಮ್ಮ ರಾಜ್ಯದ ಆರ್ಥಿಕತೆ ವೃದ್ಧಿಸಲು ಸಹಕಾರಿಯಾಗಿವೆ. ಗಗನಚುಕ್ಕಿ ಕಾವೇರಿ ನದಿ ಕವಲೊಡೆದು 300 ಅಡಿ ಎತ್ತರದಿಂದ ನೆಲಕ್ಕೆ ಬೀಳುತ್ತದೆ. ಇದು ಅತ್ಯಂತ ಸುಂದರ ಹಾಗೂ ಸೊಗಸಾದ ಪ್ರದೇಶವಾಗಿದ್ದು, ಇದು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿದೆ. ಈ ವಾತಾವರಣವನ್ನು ಅನುಭವಿಸಲು ಹೆಚ್ಚು ಜನ ಬರಬೇಕು. ಇದಕ್ಕಾಗಿಯೇ ನಾವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.

ಕಳೆದ ಎರಡು ವರ್ಷಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಮಂಡ್ಯ ಜಿಲ್ಲೆಯಲ್ಲಿ ಇದಕ್ಕಾಗಿ 3,200 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಬೇಕು ಹಾಗೂ ಮಹಿಳೆಯರೂ ಸ್ವಾವಲಂಬಿಗಳಾಗಬೇಕೆಂಬ ಕಾರಣದಿಂದ ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ.

ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಈ ಬಾರಿ 492 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಲಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿ ಕೊಂಡಿದೆ.

ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ. ಕಾವೇರಿ ನದಿಯ ಕುರಿತು ಕರ್ನಾಟಕ ಹಾಗೂ ತಮಿಳುನಾಡು ಮಧ್ಯೆ ವ್ಯಾಜ್ಯ ಈಗ ಇಲ್ಲ. ಮಳೆ ಸರಿಯಾಗಿ ಆಗಿದ್ದರೆ ಮಾತ್ರ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಒದಗಿಸಬೇಕೆಂದು ತೀರ್ಮಾನವಾಗಿದೆ. ಮಳೆಯಾಗಿಲ್ಲದಿದ್ದರೆ ಸಂಕಷ್ಟ ಸೂತ್ರ ಜಾರಿಗೆ ಬಂದು, ಅದರಂತೆ ನೀರನ್ನು ಹಂಚಿಕೆ ಮಾಡಲಾಗುವುದು. ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಏಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ರಾಜಕೀಯಕ್ಕಾಗಿ ಇದನ್ನು  ಆಕ್ಷೇಪಿಸುತ್ತಿದ್ದಾರೆ. ರಾಜ್ಯವು 98 ಟಿಎಂಸಿ ನೀರನ್ನು ತಮಿಳುನಾಡಿಗೆ ಕೊಡಬೇಕಿತ್ತು. ಆದರೆ ಇಂದಿನವರೆಗೆ 221 ಟಿಎಂಸಿ ನೀರು ತಮಿಳುನಾಡಿಗೆ ಹೋಗಿದೆ. ನಾವು  ಕೊಡಬೇಕಿದ್ದ ನೀರಿಗಿಂತಲೂ 122 ಟಿಎಂಸಿ ನೀರು ಹೆಚ್ಚಾಗಿ ಹರಿದು ಹೋಗಿದೆ. ಮಳೆ ಉತ್ತಮವಾಗಿ ಆದರೆ ನೀರನ್ನು ಕೊಟ್ಟೆ ಕೊಡುತ್ತೇವೆ.

ಅದೃಷ್ಟವಶಾತ್ ನಾವು ಅಧಿಕಾರಕ್ಕೆ ಬಂದ ಮೇಲೆ ಎರಡು ವರ್ಷವೂ ಒಳ್ಳೆ ಮಳೆಯಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಈ ವರ್ಷ ವಿದ್ಯುತ್ ಅಭಾವ ಬರಲು ಸಾಧ್ಯವಿಲ್ಲ. ನಮಗೂ ತಮಿಳುನಾಡಿಗೂ ನೀರಿನ ವಿಷಯವಾಗಿ ವಿವಾದವೂ ಬರುವುದಿಲ್ಲ. ಮಳೆ ಸಕಾಲಕ್ಕೆ ಆದರೆ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ.

ಮೇಕೆದಾಟು ಯೋಜನೆ ಜಾರಿಗೆ ತರಲು ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ತಕರಾರು ಮಾಡಬಾರದು. ಮೇಕೆದಾಟು ಅಣೆಕಟ್ಟಿನಿಂದ 66 ಟಿಎಂಸಿ ನೀರನ್ನು ಶೇಖರಣೆ ಮಾಡಲು ಸಾಧ್ಯವಾಗುತ್ತದೆ. ಇದರಿಂದ ತಮಿಳುನಾಡು ಹಾಗೂ ಕರ್ನಾಟಕಕ್ಕೂ ಉಪಯೋಗವಾಗುತ್ತದೆ. ಮಳೆ ಬಾರದಿದ್ದಾಗ ತಮಿಳುನಾಡಿಗೆ ನೀರನ್ನು ಹರಿಸಲು ಮತ್ತು ಹೆಚ್ಚು ಮಳೆ ಬಂದಾಗ ಸಮುದ್ರ ಪಾಲಾಗುವ ನೀರನ್ನು ಸಂಗ್ರಹ ಮಾಡಲು ಅನುಕೂಲವಾಗಲಿದೆ.

ಗಗನಚುಕ್ಕಿ ಜಲಪಾತ ಅಭಿವೃದ್ಧಿಗೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಜನ ಕೂತು ನೋಡಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಜನರು ಜಲಪಾತ ವೀಕ್ಷಿಸಲು ಬರಬೇಕು. ಕಳೆದ ಮೂರು ವರ್ಷಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಶಿವನಸಮುದ್ರ ಜಲಾಶಯದಲ್ಲಿ 1902 ರಲ್ಲಿ ಏಷ್ಯಾದಲ್ಲಿಯೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ ಮಾಡಿದ ಕೇಂದ್ರ ಎಂಬ ಹೆಗ್ಗಳಿಕೆಯಿದೆ.

ರಾಜ್ಯ ಇಂದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದರೆ ಅದಕ್ಕೆ ಶಿವನಸಮುದ್ರ ಮೂಲ ಕಾರಣ.ಪ್ರಸ್ತುತ ಕರ್ನಾಟಕಕ್ಕೆ ಅಗತ್ಯವಿರುವಷ್ಟು ವಿದ್ಯುತ್  ಉತ್ಪಾದನೆಯಾಗುತ್ತಿದ್ದು, ಅದನ್ನು ಬಳಸಿಕೊಳ್ಳುವ ಕೆಲಸವೂ ಆಗುತ್ತಿದೆ. ಉತ್ಪಾದಿಸಿದ ವಿದ್ಯುತ್ ನಿಂದ ರೈತರಿಗೆ ಉಪಯೋಗವಾಗುತ್ತಿದೆ.

ಈ ವರ್ಷ ಸುಮಾರು 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಬಿತ್ತನೆ ಆಗಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು.

ಈಗಾಗಲೇ ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ, ಜಾನುವಾರುಗಳ ಪ್ರಾಣ ಹಾನಿಗೆ, ಮನೆಗಳನ್ನು ಕಳೆದುಕೊಂಡವರಿಗೆ ಜಿಲ್ಲಾಡಳಿತದಿಂದ ಪರಿಹಾರ ಕೊಡಲಾಗಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಇನ್ನು ಹತ್ತು ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ ಆದಷ್ಟು ಬೇಗನೆ ಬೆಳೆ ಪರಿಹಾರ ನೀಡಲಾಗುವುದು.

ಪರಿಹಾರ ನೀಡಲು ಸರ್ಕಾರದಲ್ಲಿ ಹಣದ ಕೊರತೆಯಿಲ್ಲ.  ಆದರೂ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ ಎಂದು ವಿರೋಧ ಪಕ್ಷದವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ಸರ್ಕಾರ 99 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ. ಶೀಘ್ರದಲ್ಲೇ 1ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟುತ್ತೇವೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಅನುದಾನ ಸರ್ಕಾರದಲ್ಲಿ ಲಭ್ಯವಿದೆ.

ವಿರೋಧ ಪಕ್ಷದವರ ಸುಳ್ಳು ಪ್ರಚಾರದಲ್ಲಿ, ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ, ಸುಳ್ಳು ಸುದ್ದಿಗಳನ್ನು ಹೇಳಿ ಜನರನ್ನು ಪ್ರಚೋದಿಸಿ ಸಮಾಜದಲ್ಲಿ ಶಾಂತಿಯನ್ನು ಕದಡುವುದೇ ಅವರ ಕೆಲಸ. ಜನರು ಇದಕ್ಕೆ ಅವಕಾಶ ನೀಡದೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು.

ಸಮಾಜದಲ್ಲಿ ಜಾತಿ, ಧರ್ಮಗಳನ್ನು ಒಡೆಯುವುದು, ಜನರನ್ನು ಎತ್ತಿ ಕಟ್ಟುವುದು ವಿರೋಧಪಕ್ಷದ ಕೆಲಸ.  ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ನಾವೆಲ್ಲರೂ ಮನುಷ್ಯರಾಗಿ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಬಾಳಬೇಕು ಹಾಗೂ ಸಮಾಜ ಒಡೆಯುವ ಶಕ್ತಿಗಳಿಂದ ದೂರ ಇರಬೇಕು.

ಕಳೆದ ಲೋಕಸಭಾ ಚುನಾವಣೆಯಿಂದ ಜೆಡಿಎಸ್ ಪಕ್ಷವು, ಬಿಜೆಪಿಯೊಂದಿಗೆ ಸೇರಿ ಬಿಟ್ಟಿದೆ. ಮುಂದೆ ಅದೇ ಪಕ್ಷದೊಂದಿಗೆ ವಿಲೀನವಾದರೂ ಆಶ್ಚರ್ಯವಿಲ್ಲ. ಕೇವಲ  ನಮ್ಮ ಸರ್ಕಾರ ಮಾತ್ರ ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆ ಇಟ್ಟು, ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು ಶ್ರಮಿಸುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸೌಹಾರ್ದತೆಯನ್ನು ಪ್ರತಿಪಾದಿಸುತ್ತಿದೆ.

ದ್ವೇಷ ಸಮಾಜವನ್ನು ಒಡೆಯುತ್ತದೆ, ಪ್ರೀತಿ ಮನಸುಗಳನ್ನು ಬೆಸೆಯುತ್ತದೆ. ಪರಧರ್ಮ ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಲು ಸಾಧ್ಯ ಎಂದು ಹೇಳಿದ್ದಾರೆ.

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಿದೆ. ಅಧಿಕಾರಕ್ಕೆ ಬಂದ ಕೂಡಲೇ 50 ಕೋಟಿಗಳನ್ನು ಒದಗಿಸಿ,… pic.twitter.com/3F28HaarR5

— CM of Karnataka (@CMofKarnataka) September 13, 2025

Mandya sugar factory cannot be closed steps must be taken to make it profitable: CM Siddaramaiah
Share. Facebook Twitter LinkedIn WhatsApp Email

Related Posts

BREAKING : ವಿಶ್ವ ವಿಖ್ಯಾತ ಮೈಸೂರು ದಸರಾ : ಪ್ರಮೋದಾ ದೇವಿ ಒಡೆಯರ್‌ ಗೆ ಅಧಿಕೃತ ಆಹ್ವಾನ

14/09/2025 1:52 PM1 Min Read

ನೀರಿನ ಬಾಟಲಿ ಮುಚ್ಚಳಗಳ ಬಣ್ಣ ನೋಡಿ ನೀರಿನ ಶುದ್ಧತೆಯನ್ನು ಹೇಳಬಹುದು!

14/09/2025 1:20 PM2 Mins Read

BREAKING : ಬಳ್ಳಾರಿಯಲ್ಲಿ ಆಕ್ಟಿವ್ ಆದ ಮಗು ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಹಸುಗೂಸು ಕಿಡ್ನಾಪ್.!

14/09/2025 12:30 PM1 Min Read
Recent News

BREAKING : ವಿಶ್ವ ವಿಖ್ಯಾತ ಮೈಸೂರು ದಸರಾ : ಪ್ರಮೋದಾ ದೇವಿ ಒಡೆಯರ್‌ ಗೆ ಅಧಿಕೃತ ಆಹ್ವಾನ

14/09/2025 1:52 PM

ಗಮನಿಸಿ : `SMS, ವಾಟ್ಸಾಪ್ ಅಥವಾ ಮಿಸ್ಡ್ ಕಾಲ್ ಮೂಲಕ ನಿಮ್ಮ `PF’ ಬ್ಯಾಲೆನ್ಸ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

14/09/2025 1:47 PM

EPFO ಹೊಂದಿರುವವರಿಗೆ ಗುಡ್‌ ನ್ಯೂಸ್‌! ಇನ್ಮೇಲೆ ಹಣ ಹಿಂಪಡೆಯೋದು ಮತ್ತಷ್ಟು ಸುಲಭ

14/09/2025 1:38 PM

BREAKING: ಲಕ್ನೋದಲ್ಲಿ ಲಿಫ್ಟ್ ಆಫ್ ಆಗದೇ `ಇಂಡಿಗೋ ವಿಮಾನ’ ಟೇಕಾಫ್ ಸ್ಥಗಿತ : ಸಂಸದೆ ಡಿಂಪಲ್ ಯಾದವ್ ಸೇರಿ 151 ಪ್ರಯಾಣಿಕರು ಪಾರು

14/09/2025 1:28 PM
State News
KARNATAKA

BREAKING : ವಿಶ್ವ ವಿಖ್ಯಾತ ಮೈಸೂರು ದಸರಾ : ಪ್ರಮೋದಾ ದೇವಿ ಒಡೆಯರ್‌ ಗೆ ಅಧಿಕೃತ ಆಹ್ವಾನ

By kannadanewsnow5714/09/2025 1:52 PM KARNATAKA 1 Min Read

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಅಧಿಕೃತವಾಗಿ ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ…

ನೀರಿನ ಬಾಟಲಿ ಮುಚ್ಚಳಗಳ ಬಣ್ಣ ನೋಡಿ ನೀರಿನ ಶುದ್ಧತೆಯನ್ನು ಹೇಳಬಹುದು!

14/09/2025 1:20 PM

BREAKING : ಬಳ್ಳಾರಿಯಲ್ಲಿ ಆಕ್ಟಿವ್ ಆದ ಮಗು ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಹಸುಗೂಸು ಕಿಡ್ನಾಪ್.!

14/09/2025 12:30 PM

ಮನೆಯ ಗೋಡೆಯ ಮೇಲೆ ಗೆದ್ದಲು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ : ಜಸ್ಟ್ 50 ರೂ.!

14/09/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.